ವಿಷಯಕ್ಕೆ ಹೋಗಿ

ಭ್ರಮೆ


ನೀನೊಂದು ಸುಂದರ ಸುಳ್ಳು
ನನ್ನೊಳಗಿನ ಸ್ಪೂರ್ತಿಯ ನೆರಳು

ಪ್ರತಿ ಕ್ಷಣವೂ ನಿನ್ನೊಡನೆ ಕಳೆಯುವಾಸೆ
ನಾಳೆಗಳ ಹಾಳೆಯಲ್ಲಿ ನಿನನ್ನೇ ಗೀಚುವಾಸೆ 
ಮುಂಜಾವಿನ ಮಂಜಿನ ಹನಿಗಳಂತೆ
ತಂಗಾಳಿಯ ಸಿಹಿ ತಂಪಿನಂತೆ
ನಿನ್ನೆದೆಯಲ್ಲೊಂದು ಕನಸಾಗುವಾಸೆ..

ನಡೆದಷ್ಟು ದಾರಿ ನಿನ್ನ ಹೆಸರಲ್ಲೇ ಸವಿದಾಗಿದೆ
ಇನ್ನಷ್ಟು ನೆನಪುಗಳು ನಿನ್ನನ್ನೇ ಅವಲಂಬಿಸಿವೆ
ಮನಸ್ಸಿನ ಪ್ರತಿ ಮಿಡಿತದ ರೂವಾರಿ ನೀ
ನಿನ್ನೊಲವಿನ ಸಂದಾಯಕ್ಕೆ ನಾ ದುಬಾರಿಯಾಗುವಾಸೆ..

ಕ್ಷಣ ಕ್ಷಣವೂ ಕೂತುಹಲ ಬಾಳು ನಿನ್ನಿಂದಲೇ
ನೀನಿರದೇ ನಿಂತಂತೆ ಭುವಿ ಸುಮ್ಮನೆ
ನನ್ನೊಳ ಆಸೆಗಳಿಗೆ ರೆಕ್ಕೆ ನೀನೇ
ಹಾರದಂತೆ ಪಂಜರದಿ ಬಂದಿಸಿದ್ದು ನೀನೇ
ವಿಚಿತ್ರ ಪ್ರೀತಿಗೆ ದೂರು ನೂರಾರು
ಅವೆಲ್ಲ ಕಡೆಗಣಿಸಿ ನಿನ್ನಲ್ಲೇ ಅನುರಕ್ತಳಾಗುವಾಸೆ..

ಸಾವಿರ ಅನುಭವವನ್ನು ಮೀರಿದ ಅನುಭೂತಿ
ವಿಶೇಷವೆನಗೆ ಈ ಭಾವನೆಗಳ ಸಂಗತಿ
ಅನುಸರಿಸಿವೆ ಹೆಜ್ಜೆಗಳು ನೀನಡೆವ ದಾರಿಯನ್ನೇ
ಕಲ್ಲು ಮುಳ್ಳು ಪರಿವೆಯಿಲ್ಲ ನಾನಿನ್ನು ನಿನ್ನ ನೆರಳೇ!
ಜಗದ ನಿಯಮಕ್ಕೆ ವ್ಯತಿರಿಕ್ತವಾಗಿ
ನಾ ಪೂರ್ತಿ ನಿನ್ನ ವಶವಾಗುವಾಸೆ..

ನೀ ನನ್ನವನಲ್ಲ ನನಗೆಂದೂ ಸಿಗುವುದಿಲ್ಲ
ಬಲ್ಲೆ ನಾ ಬದುಕಿನ ಕಹಿ ಸತ್ಯವನ್ನೆಲ್ಲ
ಆದರೂ ಮನ ಮಿಡಿಯುವದು
 ಎಟುಕದ ಚಂದ್ರನೇ ಬೇಕೆನ್ನುವದು
ಅದಕ್ಕೆ ಪೊಷಿಸಿ ನೀರೆರೆದೆ ಒಂದು ಭ್ರಮೆಯ
ಆ ಭ್ರಮೆಯಲ್ಲಾದರೂ ನೀ ನನ್ನವನೆಂಬಾಸೆ..

                *****

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ನೀ ನನ್ನ ಒಲವು..❤ ಸಂಚಿಕೆ-20

ಮನೆಗೆ ಮರಳಿದ ಪರಿಧಿ ಮುಂದೆ ಏನು ಮಾಡಬೇಕೆಂದು ತಿಳಿಯದೆ ಕ್ಷಣಕಾಲ ಕಣ್ಣು ಮುಚ್ಚಿ ಸೋಫಾ ಮೇಲೆ ಒರಗಿ ಬಿಟ್ಟಿದ್ದಳು. ಹುಡುಕಾಟದ ಆರಂಭ ಎಲ್ಲಿಂದ? ಹೇಗೆ? ಮನೆಯಲ್ಲಿ ಏನೆಂದು ಹೇಳಿ ಹೊರಡುವುದು? ಸಹಾಯ ನಿರೀಕ್ಷೆ ಇದ್ದದ್ದು ಪ್ರಸನ್ನನಿಂದ ಮಾತ್ರ,, ಈಗ ಅವರು ತನಗೆ ಬೆಂಬಲಕ್ಕೆ ನಿಲ್ಲದೆ ವ್ಯತಿರಿಕ್ತವಾಗೇ ವರ್ತಿಸಿದರು. ಮುಂದೆ ಏನು ಮಾಡಬೇಕೆಂದು ತಿಳಿಯದೆ ನಿತ್ರಾಣಳಾಗಿ ಕುಳಿತು  ಬಿಟ್ಟಿದ್ದಳು. "ಯಾಕೆ?? ಸುಮ್ಮನೆ ಕುಳಿತೇ..!  ಇಷ್ಟು ಬೇಗ ಸೋತು ಹೋದೆಯಾ.."  ಹರ್ಷ ಕಣ್ಣಿಗೆ ಬಟ್ಟೆ ಕಟ್ಟಿ ಅಲ್ಲಿಯೇ ಸುತ್ತ ಮುತ್ತ ನಿಂತು ಚಪ್ಪಾಳೆ ತಟ್ಟಿ ನನ್ನ ಹುಡುಕು ನೋಡೋಣ ಎಂದು ಅಣಗಿಸಿದಂತಾಯಿತು ಪರಿಧಿಗೆ. ತಕ್ಷಣ ಕಣ್ಣು ತೆರೆದು ಬೆಚ್ಚಿದ್ದಳು ಹರ್ಷ... ಅವಳ ಸೋತ ಮನಸ್ಸಿಗೆ ಅವನ ನೆನಪೇ ಚೈತನ್ಯ ತುಂಬಿತ್ತು. ಅರಿಯದ ಮುಂದಿನ ಕತ್ತಲೆಯ ದಾರಿಯಲ್ಲಿ ಅವನ ಇರುವಿಕೆಯೇ ಬೆಳಕಿನ ದೀವಿಗೆಯಾಗಿತ್ತು. ಆ ಕೂಡಲೇ ಆಕೆ ಪಾದರಸದಂತೆ ಮುಂದಿನ ಯೋಜನೆಗಳನ್ನು ರೂಪಿಸಿದಳು. ಹಳೆಯ ಸ್ನೇಹಿತೆಯರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಮಾನ್ಚಿಯ ಬಗ್ಗೆ ಮಾಹಿತಿ ತಿಳಿದುಕೊಳ್ಳಲು ಪ್ರಯತ್ನಿಸಿದಳು. ಆದರೆ ಅವಳ ಎಣಿಕೆ ಪ್ರಕಾರ ಮಾನ್ವಿ ಬಗ್ಗೆ ಸದ್ಯದ ಮಾಹಿತಿಗಳೇನೂ ಲಭೀಸಲಿಲ್ಲ‌. ಇನ್ನೂ ಮುಂಬೈನ ಎಂ.ಆರ್ ಹಾಸ್ಪಿಟಲ್‌ನಿಂದಲೇ ಮುಂದಿನ ಕೆಲಸ ಸಾಧ್ಯವೆಂದು ಅರಿತ ಮೇಲೆ ಅತ್ತೆ ಸುಲೋಚನರ ಬಳಿ ಕೂತು ಮಾತಾಡಿ ತಾನು ಕೆಲವು ದಿನಗಳ ಮಟ್ಟಿಗೆ ತ...

ನೀ ನನ್ನ ಒಲವು..❤ ಸಂಚಿಕೆ- 54

ಅಂದು ಆಸ್ಪತ್ರೆಯಲ್ಲಿ ಮಾನ್ವಿಯ ಮೊದಲ ದಿನ. ಅದೂ ಡಾ.ಪ್ರಸನ್ನನ ಅರ್ಧಾಂಗಿಯಾಗಿ.  ಪ್ರಸನ್ನನ ಕರ್ಕಶ ಸದ್ದಿನ ಬೈಕ್ ಮೇಲೆ ಇಬ್ಬರೂ ಆಸ್ಪತ್ರೆಗೆ ಬಂದು ಇಳಿಯುತ್ತಿದ್ದಂತೆ "Congratulations sir.." ಶಿಷ್ಯರ ಒಕ್ಕೊರಲಿನ ಕೂಗು ಕೇಳಿ ಬಂದಿತು. ಎದುರಿಗೆ ಒಂದೇ ಒಂದು ಕೆಂಗುಲಾಬಿಗೆ ಮೂರು ಕೈಗಳು ಬಡಿದಾಡುತ್ತಿದ್ದವು.  ಹೂಗುಚ್ಚ ಮರೆತಿದ್ದರೇನೋ ಪಾಪ ಸಿಕ್ಕ ಒಂದು ಗುಲಾಬಿಯ ಬೇಡಿಕೆ ಜಾಸ್ತಿಯಾಗಿತ್ತು‌. ಜಿಪುಣ ಗುರುವಿನ ಹಾದಿಯಲ್ಲಿ ನಡೆಯುವ ಶಿಷ್ಯರ ಬಗ್ಗೆ ಹೆಚ್ಚೇನೂ ಹೇಳಬೇಕಿಲ್ಲ. ಇನ್ನೊಬ್ಬ ಪರಮ ಆದ್ಯ ಶಿಷ್ಯೋತ್ತಮ ಎಲ್ಲೂ ಕಾಣಲಿಲ್ಲ. ಅತ್ತಿತ್ತ ನೋಡಿದ ಪ್ರಸನ್ನ.  " ಎಲ್ಲಿ ? ವಿಜ್ಞಾನಿಗಳು ಕಾಣಿಸ್ತಿಲ್ಲವಲ್ಲ?" ಹೂ ತೆಗೆದುಕೊಳ್ಳುತ್ತಾ ಕೇಳಿದ. "ಅವನಿಗೆ ಬೆಳಿಗ್ಗೆ ಬೆಳಿಗ್ಗೆ ಡಾ.ಕುಮಾರ್ ಕಡೆಯಿಂದ ಮಂಗಳಾರತಿ ನಡಿತಿದೆ ಪಾಪ" ನಕ್ಕು ನುಡಿದ ಧೃವ. " ಯಾಕೆ? ಅವರ ಮೇಲೆ ಏನಾದ್ರೂ ಎಕ್ಸ್ಪೆರಿಮೆಂಟ್ ಮಾಡಿದ್ನಾ?"  "ಎಕ್ಸ್ಪೆರಿಮೆಂಟ್ ಗುಂಗಿನಲ್ಲಿ ರಿಪೋರ್ಟ್ ಅದಲು ಬದಲು ಮಾಡಿದ್ದಾನಂತೆ. ಅದೂ ಯಾರದೋ ಡೆತ್ ರಿಪೋರ್ಟ್‌ನ್ನು ಆಗತಾನೇ ಚೆಕ್‌ಪ್‌ಗೆ ಹೋಗಿರುವ ವ್ಯಕ್ತಿ ಕಡೆಯವರ ಕೈಯಲ್ಲಿ ಇಟ್ಟವ್ನೆ‌. ಆ ಪುಣ್ಯಾತ್ಮರು ಒಂದು ಕ್ಷಣ ಷಾಕ್ ಆಗಿ ಇವನಿಗೆ ಬಾಯಿಗೆ ಬಂದಹಾಗೆ ಉಗಿದು ಡಾ.ಕುಮಾರ್ ಹತ್ತಿರ ದೂರು ಕೊಟ್ಟಿದ್ದಾರೆ. " " irresponsible fellow...

ನೀ ನನ್ನ ಒಲವು..❤ ಸಂಚಿಕೆ- 55

                ಕೆಲವು ದಿನಗಳ ನಂತರ ಅದೊಂದು ಭಾನುವಾರ. ಯತಾಪ್ರಕಾರ ರೂಢಿಯಂತೆ ಪ್ರಸನ್ನ ಆಶ್ರಮಕ್ಕೆ ಬಂದಿದ್ದ.  ಮಾನ್ವಿ, ಹರ್ಷ ಪರಿಧಿ ಹರಿಣಿ  ಮತ್ತು ಅವರಿಬ್ಬರನ್ನೂ ಶತಾಯಗತಾಯ ಒಂದು ಮಾಡುವ ಪಣ ತೊಟ್ಟಿದ್ದ ಪ್ರಸನ್ನನ ಚತುರ್ ಶಿಷ್ಯವೃಂದ ಕೂಡ ಅವತ್ತು ಆಶ್ರಮಕ್ಕೆ ಬಂದಿದ್ದು ಅವತ್ತಿನ ವಿಶೇಷ.  ಆಶ್ರಮದ ಮಕ್ಕಳಲ್ಲೂ ಏನೋ ಸಂಭ್ರಮದ ವಾತಾವರಣ. ಆಟ ಓಟ ಜೂಟಾಟ, ಹಾಡು ಹರಟೆ ಭರದಿಂದ ಸಾಗಿದ್ದವು.  ಎರಡು ಟೀಮ್ ಮಾಡಲಾಗಿತ್ತು. ವಿವಿಧ ರೀತಿಯ ಆಟೋಟಗಳನ್ನು ಏರ್ಪಡಿಸಲಾಯಿತು. ಗೆದ್ದ ತಂಡ ಸೋತ ತಂಡಕ್ಕೆ ತಮಗಿಷ್ಟ ಬಂದ ಶಿಕ್ಷೆ ವಿಧಿಸಬಹುದಾಗಿತ್ತು. ಪ್ರಸನ್ನ ಮತ್ತು ಮಾನ್ವಿಯದು ಯಾವತ್ತಿಗೂ ವಿರೋಧ ಪಕ್ಷವೇ. ರೋಹಿತ್ ಆಟದ ನಿಯಮಗಳನ್ನು ವಿವರಿಸಿದ "ಒಕೆ ಒಕೆ " ಒಕ್ಕೊರಲಿನ ಒಪ್ಪಿಗೆಯಾಯಿತು. ಮಕ್ಕಳ ಮುಂದಾಳತ್ವದಲ್ಲಿ ಕೆಲವು ಆಟಗಳನ್ನು ಆಡಲಾಯಿತು. ಪ್ರತಿಬಾರಿ ಸೋಲು ಗೆಲುವಿನ ವಿಷಯದಲ್ಲಿ ಮಾನ್ವಿ ಪ್ರಸನ್ನನದು ಇಲ್ಲದ ಒಣರಗಳೆ. ಅವರ ವಿಶ್ವವ್ಯಾಪಿ ಕದನ ನೋಡಿ ಮಕ್ಕಳಿಗೆ ಶತಪ್ರತಿಶತ ಮನೋರಂಜನೆಯಾದರೆ,  ಹರ್ಷ, ರೋಹಿತ್ ಸೇರಿದಂತೆ ಇತರರಿಗೆ ದೊಡ್ಡ ತಲೆ ನೋವಇರ್ಹೀಗ  "ಇವರಿಬ್ಬರ ಜಗಳ ಈ ಜನ್ಮದಲ್ಲಿ ಸರಿಹೋಗೋ ತರ ಕಾಣ್ತಿಲ್ಲ " ಬಿಸಿಲ ಶಾಖಕ್ಕೆ ದಣಿದು ಬೇಸತ್ತು ನೆಲಕ್ಕೆ ಪಟ್ಟು ಹಾಕಿ  ಕುಳಿತು ಬಿಟ್ಟ ಹರ್ಷ.  "ಹೇಳೊಕಾಗಲ್ಲ, ಇ...