ಅಂದು ಆಸ್ಪತ್ರೆಯಲ್ಲಿ ಮಾನ್ವಿಯ ಮೊದಲ ದಿನ. ಅದೂ ಡಾ.ಪ್ರಸನ್ನನ ಅರ್ಧಾಂಗಿಯಾಗಿ. ಪ್ರಸನ್ನನ ಕರ್ಕಶ ಸದ್ದಿನ ಬೈಕ್ ಮೇಲೆ ಇಬ್ಬರೂ ಆಸ್ಪತ್ರೆಗೆ ಬಂದು ಇಳಿಯುತ್ತಿದ್ದಂತೆ "Congratulations sir.." ಶಿಷ್ಯರ ಒಕ್ಕೊರಲಿನ ಕೂಗು ಕೇಳಿ ಬಂದಿತು. ಎದುರಿಗೆ ಒಂದೇ ಒಂದು ಕೆಂಗುಲಾಬಿಗೆ ಮೂರು ಕೈಗಳು ಬಡಿದಾಡುತ್ತಿದ್ದವು. ಹೂಗುಚ್ಚ ಮರೆತಿದ್ದರೇನೋ ಪಾಪ ಸಿಕ್ಕ ಒಂದು ಗುಲಾಬಿಯ ಬೇಡಿಕೆ ಜಾಸ್ತಿಯಾಗಿತ್ತು. ಜಿಪುಣ ಗುರುವಿನ ಹಾದಿಯಲ್ಲಿ ನಡೆಯುವ ಶಿಷ್ಯರ ಬಗ್ಗೆ ಹೆಚ್ಚೇನೂ ಹೇಳಬೇಕಿಲ್ಲ. ಇನ್ನೊಬ್ಬ ಪರಮ ಆದ್ಯ ಶಿಷ್ಯೋತ್ತಮ ಎಲ್ಲೂ ಕಾಣಲಿಲ್ಲ. ಅತ್ತಿತ್ತ ನೋಡಿದ ಪ್ರಸನ್ನ. " ಎಲ್ಲಿ ? ವಿಜ್ಞಾನಿಗಳು ಕಾಣಿಸ್ತಿಲ್ಲವಲ್ಲ?" ಹೂ ತೆಗೆದುಕೊಳ್ಳುತ್ತಾ ಕೇಳಿದ. "ಅವನಿಗೆ ಬೆಳಿಗ್ಗೆ ಬೆಳಿಗ್ಗೆ ಡಾ.ಕುಮಾರ್ ಕಡೆಯಿಂದ ಮಂಗಳಾರತಿ ನಡಿತಿದೆ ಪಾಪ" ನಕ್ಕು ನುಡಿದ ಧೃವ. " ಯಾಕೆ? ಅವರ ಮೇಲೆ ಏನಾದ್ರೂ ಎಕ್ಸ್ಪೆರಿಮೆಂಟ್ ಮಾಡಿದ್ನಾ?" "ಎಕ್ಸ್ಪೆರಿಮೆಂಟ್ ಗುಂಗಿನಲ್ಲಿ ರಿಪೋರ್ಟ್ ಅದಲು ಬದಲು ಮಾಡಿದ್ದಾನಂತೆ. ಅದೂ ಯಾರದೋ ಡೆತ್ ರಿಪೋರ್ಟ್‌ನ್ನು ಆಗತಾನೇ ಚೆಕ್‌ಪ್‌ಗೆ ಹೋಗಿರುವ ವ್ಯಕ್ತಿ ಕಡೆಯವರ ಕೈಯಲ್ಲಿ ಇಟ್ಟವ್ನೆ. ಆ ಪುಣ್ಯಾತ್ಮರು ಒಂದು ಕ್ಷಣ ಷಾಕ್ ಆಗಿ ಇವನಿಗೆ ಬಾಯಿಗೆ ಬಂದಹಾಗೆ ಉಗಿದು ಡಾ.ಕುಮಾರ್ ಹತ್ತಿರ ದೂರು ಕೊಟ್ಟಿದ್ದಾರೆ. " " irresponsible fellow...
ಆಗಾಗ ಮನದಲ್ಲಿ ಪುಟಿಯುವ ಭಾವನೆಗಳಿಗೆ ಅಕ್ಷರಗಳ ಬಣ್ಣ ಬಳಿಯುವ ಹವ್ಯಾಸಿಯ ಪದಗಳ ಪಯಣ..