ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಏಪ್ರಿಲ್, 2021 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ನೀ ನನ್ನ ಒಲವು..❤ ಸಂಚಿಕೆ- 55

                ಕೆಲವು ದಿನಗಳ ನಂತರ ಅದೊಂದು ಭಾನುವಾರ. ಯತಾಪ್ರಕಾರ ರೂಢಿಯಂತೆ ಪ್ರಸನ್ನ ಆಶ್ರಮಕ್ಕೆ ಬಂದಿದ್ದ.  ಮಾನ್ವಿ, ಹರ್ಷ ಪರಿಧಿ ಹರಿಣಿ  ಮತ್ತು ಅವರಿಬ್ಬರನ್ನೂ ಶತಾಯಗತಾಯ ಒಂದು ಮಾಡುವ ಪಣ ತೊಟ್ಟಿದ್ದ ಪ್ರಸನ್ನನ ಚತುರ್ ಶಿಷ್ಯವೃಂದ ಕೂಡ ಅವತ್ತು ಆಶ್ರಮಕ್ಕೆ ಬಂದಿದ್ದು ಅವತ್ತಿನ ವಿಶೇಷ.  ಆಶ್ರಮದ ಮಕ್ಕಳಲ್ಲೂ ಏನೋ ಸಂಭ್ರಮದ ವಾತಾವರಣ. ಆಟ ಓಟ ಜೂಟಾಟ, ಹಾಡು ಹರಟೆ ಭರದಿಂದ ಸಾಗಿದ್ದವು.  ಎರಡು ಟೀಮ್ ಮಾಡಲಾಗಿತ್ತು. ವಿವಿಧ ರೀತಿಯ ಆಟೋಟಗಳನ್ನು ಏರ್ಪಡಿಸಲಾಯಿತು. ಗೆದ್ದ ತಂಡ ಸೋತ ತಂಡಕ್ಕೆ ತಮಗಿಷ್ಟ ಬಂದ ಶಿಕ್ಷೆ ವಿಧಿಸಬಹುದಾಗಿತ್ತು. ಪ್ರಸನ್ನ ಮತ್ತು ಮಾನ್ವಿಯದು ಯಾವತ್ತಿಗೂ ವಿರೋಧ ಪಕ್ಷವೇ. ರೋಹಿತ್ ಆಟದ ನಿಯಮಗಳನ್ನು ವಿವರಿಸಿದ "ಒಕೆ ಒಕೆ " ಒಕ್ಕೊರಲಿನ ಒಪ್ಪಿಗೆಯಾಯಿತು. ಮಕ್ಕಳ ಮುಂದಾಳತ್ವದಲ್ಲಿ ಕೆಲವು ಆಟಗಳನ್ನು ಆಡಲಾಯಿತು. ಪ್ರತಿಬಾರಿ ಸೋಲು ಗೆಲುವಿನ ವಿಷಯದಲ್ಲಿ ಮಾನ್ವಿ ಪ್ರಸನ್ನನದು ಇಲ್ಲದ ಒಣರಗಳೆ. ಅವರ ವಿಶ್ವವ್ಯಾಪಿ ಕದನ ನೋಡಿ ಮಕ್ಕಳಿಗೆ ಶತಪ್ರತಿಶತ ಮನೋರಂಜನೆಯಾದರೆ,  ಹರ್ಷ, ರೋಹಿತ್ ಸೇರಿದಂತೆ ಇತರರಿಗೆ ದೊಡ್ಡ ತಲೆ ನೋವಇರ್ಹೀಗ  "ಇವರಿಬ್ಬರ ಜಗಳ ಈ ಜನ್ಮದಲ್ಲಿ ಸರಿಹೋಗೋ ತರ ಕಾಣ್ತಿಲ್ಲ " ಬಿಸಿಲ ಶಾಖಕ್ಕೆ ದಣಿದು ಬೇಸತ್ತು ನೆಲಕ್ಕೆ ಪಟ್ಟು ಹಾಕಿ  ಕುಳಿತು ಬಿಟ್ಟ ಹರ್ಷ.  "ಹೇಳೊಕಾಗಲ್ಲ, ಇದೇ ಜಗಳ ಮುಂದೆ ಪ್ರೀತಿಯಾಗಿ ಬದಲಾಗಬಹುದಲ್ವ" ಕುತೂಹಲದಿಂದ